Udayavani | May 08, 2013
ಪ್ರಸನ್ನ ಕುಮಾರ್ ಕೆ ಬಿ, ನೂತನ ಶಿವಮೊಗ್ಗ MLA |
ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಆಘಾತಕಾರಿ ಫಲಿತಾಂಶ ಹೊರಬಿದ್ದಿದೆ. ಹಾಲಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಅವರಿಗೆ ಕ್ಷೇತ್ರದ ಮತದಾರ ಸೋಲಿನ ರುಚಿ ತೋರಿಸಿದ್ದಾರೆ. ಮಾತ್ರವಲ್ಲದೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಈ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ಕೇಸರಿ ಪಡೆ ಸಂಪೂರ್ಣವಾಗಿ ನೆಲಕಚ್ಚಿದಂತಾಗಿದೆ. ಜಿಲ್ಲೆಯ ಎಲ್ಲಾ 7 ಕ್ಷೇತ್ರಗಳಲ್ಲಿ ಬಿಜೆಪಿ ನೆಲ ಕಚ್ಚಿದೆ. ಕಾಂಗ್ರೆಸ್‌ನ ಪ್ರಸನ್ನ ಕುಮಾರ್ ಅವರು ಈಶ್ವರಪ್ಪ ಅವರಿಗೆ ಸೋಲಿನ ರುಚಿ ತೋರಿಸಿದ್ದಾರೆ. ಕರಾವಳಿ ಸೇರಿದಂತೆ ಎಲ್ಲಾ ಕಡೆ ಸೋತು ಸುಣ್ಣವಾಗಿರುವ ಕಮಲ ಪಕ್ಷಕ್ಕೆ ಇದರಿಂದ ಇನ್ನೊಂದು ಆಘಾತವಾದಂತಾಗಿದೆ.

ಜೆಡಿಎಸ್, ಕೆ.ಜೆ.ಪಿ., ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದರು. ಆದರೆ ಇಲ್ಲಿ ಬಿಜೆಪಿ-ಕಾಂಗ್ರೆಸ್-ಕೆಜೆಪಿ ನಡುವೆ ತ್ರಿಕೋನ ಸ್ಪರ್ಧೆ ಎದುರಾಗಿತ್ತು.
ಒಟ್ಟು 223 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಪಿರಿಯಾಪಟ್ಟಣದಲ್ಲಿ ಅಭ್ಯರ್ಥಿಯೋರ್ವರು ಮೃತಪಟ್ಟಿದ್ದರಿಂದ ಅಲ್ಲಿ ಚುನಾವಣೆ ನಡೆದಿಲ್ಲ.
No comments:
Post a Comment